ಬೆಂಗಳೂರು,ಫೆ.01 (DaijiworldNews/HR): "ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ,ಮಾಡಿರುವ ಅವರು, ಈ ಬಾರಿಯ ಬಜೆಟ್ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದ್ದು, ಕೊರೊನಾ ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ" ಎಂದರು.
ಇನ್ನು "ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ಬಜೆಟ್ ನಲ್ಲಿ 13 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿರುವುದು, ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದನ್ನು ಸ್ವಾಗತಿಸುತ್ತೇನೆ. ಪ್ರಸಕ್ತ ಬಜೆಟ್ ಅರ್ಥವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ತುಂಬುವ ಸಾಮರ್ಥ್ಯ ಪ್ರದರ್ಶಿಸಿದೆ" ಎಂದು ಹೇಳಿದ್ದಾರೆ.