ಬೆಂಗಳೂರು, ಫೆ.03(DaijiworldNews/HR): ಯಲಹಂಕದ ವಾಯುನೆಲೆಯಲ್ಲಿ ಏರ್ಪಡಿಸಲಾಗಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ 13ನ ಆವೃತ್ತಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಬುಧವಾರ ಚಾಲನೆ ನೀಡಿದ್ದಾರೆ.
ರಾಷ್ಟ್ರಧ್ವಜ, ಭಾರತೀಯ ವಾಯುಪಡೆಯ ಧ್ವಜ ಹಾಗೂ ಏರೋ ಇಂಡಿಯಾ 2021ರ ಬಾವುಟಗಳನ್ನು ಹೊತ್ತುಕೊಂಡು ಮೂರು ಎಂಐ–17 ಹೆಲಿಕಾಪ್ಟರ್ಗಳು ಸಾಗಿಬರುವ ಮೂಲಕ ಏರೊ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ನಾಂದಿ ಹಾಡಿದವು.
ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕೊರೊನಾದ ಬಳಿಕ ನಡೆಯುತ್ತಿರುವ ಜಗತ್ತಿನಲ್ಲಿ ಮೊದಲ ವೈಮಾನಿಕ ಪ್ರದರ್ಶನ ಇದಾಗಿದೆ.