ಮದ್ದೂರು, ಫೆ.03 (DaijiworldNews/MB) : ಮನೆಯೊಂದಕ್ಕೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು 39 ವರ್ಷದ ಮಹಿಳೆಯೊಬ್ಬರ ಕೈಕಾಲು ಕಟ್ಟಿ ಮಂಚಕ್ಕೆ ಕಟ್ಟಿ ಹಾಕಿ ಉಸಿರುಗಟ್ಟಿಸಿ ಹತ್ಯೆಗೈದಿರುವ ಘಟನೆ ಪಟ್ಟಣದ ವಿ.ವಿ. ನಗರದಲ್ಲಿ ನಡೆದಿದ್ದು ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯು ಸಂಜೆ ಸುಮಾರು 4ರಿಂದ 5ರ ಸಮಯದಲ್ಲಿ ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ವರದಿಯಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹಾಗೂ ಸಿಪಿಐ ಪ್ರಸಾದ್ ಅವರು ಶ್ವಾನದಳ, ಬೆರಳಚ್ಚು ತಜ್ಞರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಕೆ.ಪರಶುರಾಮ, ಪ್ರಸ್ತುತ ತನಿಖೆ ನಡೆಯುತ್ತಿದ್ದು ಅತ್ಯಾಚಾರ ನಡೆದಿರುವ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವೇ ತಿಳಿಯಲಿದೆ ಎಂದು ಹೇಳಿದ್ದಾರೆ.