ನವದೆಹಲಿ,ಫೆ.03(DaijiworldNews/HR): ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವಂತಹ ಟ್ವೀಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್, ಹಿರಿಯ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.
ಸಂಸದ ತರೂರ್, ಪತ್ರಕರ್ತ ರಾಜ್ದೀಪ್, ಕ್ಯಾರವಾನ್ ಪೋರ್ಟಲ್ ಹಾಗೂ ಇತರರ ವಿರುದ್ಧ ದೆಹಲಿ ಪೊಲೀಸರು ಜನವರಿ 30ರಂದು ಎಫ್ಐಆರ್ ದಾಖಲಿಸಿದ್ದಾರೆ.
ಇನ್ನು ತರೂರ್ ಮತ್ತು ಆರು ಜನ ಪತ್ರಕರ್ತರ ವಿರುದ್ಧ ನೋಯ್ಡಾ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದು, ಇವರೆಲ್ಲರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಸಹ ಪ್ರಕರಣ ದಾಖಲಿಸಿದ್ದಾರೆ.