ನವದೆಹಲಿ, ಫೆ.03(DaijiworldNews/HR): "ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು" ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿಗಳಾದ ನಟ ದೀಪ್ ಸಿಧು, ಜುಗ್ ರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ.
ಇನ್ನು "ಜನವರಿ 26ರಂದು ನಡೆದ ಹಿಂಸಾಚಾರದಲ್ಲಿ ಶಾಮೀಲಾದ ಜಜ್ಬೀರ್ ಸಿಂಗ್, ಬೂಟಾ ಸಿಂಗ್, ಸುಖ್ ದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು" ಎಂದು ದೆಹಲಿ ಪೊಲೀಸರು ಘೋಷಿಸಿದ್ದಾರೆ.