ಬೆಂಗಳೂರು, ಫೆ.03(DaijiworldNews/HR): "ಬಜೆಟ್ನಲ್ಲಿ ಸತ್ಯವೇ ಇಲ್ಲ, ಎಲ್ಲವೂ ಸುಳ್ಳಿನ ಕಂತೆಯಷ್ಟೇ. ಸರ್ಕಾರ ರಾಜ್ಯಪಾಲರಲ್ಲಿ ಸುಳ್ಳು ಹೇಳಿಸಿದ್ದು, ಈ ಸುಳ್ಳನ್ನೆ ಬೆಂಬಲಿಸಿ ಕೆಲವು ಸದಸ್ಯರು ದೀರ್ಘವಾಗಿ ಭಾಷಣ ಮಾಡಿದ್ದಾರೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬಜೆಟ್ನಲ್ಲಿ ಹೇಳಿರುವುದು ಎಲ್ಲವೂ ಸುಳ್ಳೆ, ನಮ್ಮ ಸರ್ಕಾರದ ಸಾಧನೆಗಳನ್ನೇ ಯೋಜನೆಗಳನ್ನೇ ನಮ್ಮದೆಂದು ಬಜೆಟ್ನಲ್ಲಿ ಹೇಳಿಕೊಂಡಿದ್ದು,ಯಾವುದೇ ಚುನಾಯಿತ ಸರ್ಕಾರ ಮಾಡುವ ಕೆಲಸವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಪಾಲರಿಗೆ ಒಂದು ಗೌರವ ಇರುತ್ತದೆ. ಆದರೆ ಬಿಜೆಪಿ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ಅವರ ಬಾಯಿಯ ಮೂಲಕ ಸುಳ್ಳು ಹೇಳಿಸಿದೆ" ಎಂದರು.
ಇನ್ನು "ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಯಡಿಯೂರಪ್ಪ 18 ತಿಂಗಳಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬುದರ ಬಗ್ಗೆ ಚರ್ಚೆಗೆ ಬರಲಿ. ನಾವು ಎಂದಿಗೂ ಚರ್ಚೆಗೆ ಸಿದ್ಧ, ಯಡಿಯೂರಪ್ಪ ಚರ್ಚೆಗೆ ಸಿದ್ಧರಿದ್ದಾರೆಯೇ" ಎಂದು ಸವಾಲು ಹಾಕಿದ್ದಾರೆ.