ನವದೆಹಲಿ, ಫೆ.03(DaijiworldNews/HR): "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನ್ನು ವಿರೊಧಿಸಿ ಪ್ರತಿಭಟಿಸುತ್ತಿರುವ ರೈತರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ" ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವುದು, ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ ವಿಚಾರವಾಗಿದೆ" ಎಂದರು.
ಇನ್ನು ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುತ್ತದೆಯೇ, ಸರ್ಕಾರವು ಅನೌಪಚಾರಿಕವಾಗಿ ಮಾತುಕತೆ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ತೋಮರ್ ಅವರು 'ಇಲ್ಲ' ಎಂದು ಉತ್ತರಿಸಿದ್ದಾರೆ.