ನವದೆಹಲಿ,ಫೆ.03(DaijiworldNews/HR): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕೇರಳದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
ಸಹ ಉಸ್ತುವಾರಿಯನ್ನಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ನೇಮಿಸಲಾಗಿದೆ.
ಇನ್ನು ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿಯ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಹಾಗೂ ಸಹ ಉಸ್ತುವಾರಿಯನ್ನಾಗಿ ವಿ.ಕೆ. ಸಿಂಗ್ ಅವರನ್ನು ನೇಮಿಸಲಾಗಿದೆ.
ಅಸ್ಸಾಂ ಉಸ್ತುವಾರಿಯನ್ನಾಗಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನೇಮಿಸಲಾಗಿದ್ದು, ಇವರ ಜತೆಗೆ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಸಹ ಉಸ್ತುವಾರಿಯಾಗಿರುತ್ತಾರೆ.