ನವದೆಹಲಿ, ಫೆ.03 (DaijiworldNews/PY): "ರೈತರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸುತ್ತಿಲ್ಲ" ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಬುಧವಾರ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ರೈತರ ಬಗ್ಗೆ ಕೇಂದ್ರ ಕಾಳಜಿ ವಹಿಸುತ್ತಿಲ್ಲ. ಇಷ್ಟೊಂದು ದೊಡ್ಡ ಪ್ರತಿಭಟನೆ ನಡೆಯುತ್ತಿದ್ದರೂ ಕೂಡಾ ಕೇಂದ್ರ ಸರ್ಕಾರ ಯಾವುದೇ ರೀತಿಯಾದ ಕ್ರಮ ತೆಗೆದುಕೊಂಡಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
"ಯಾವುದೇ ಕಾರಣಕ್ಕೂ ಕೂಡಾ ರೈತರು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ. ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು" ಎಂದಿದ್ದಾರೆ.
"ಜನರಿಗೆ ಹಾಗೂ ದೇಶದ ಘನತೆಗೆ ರೈತರ ಪ್ರತಿಭಟನೆಯಿಂದ ಧಕ್ಕೆ ಉಂಟಾಗುತ್ತಿದ್ದ, ಇದನ್ನು ಮೊದಲು ಸರಿಪಡಿಸಬೇಕು. ರೈತರ ಪ್ರತಿಭಟನೆಯಿಂದ ರೈತರಿಗೆ ಮಾತ್ರವಲ್ಲ ಅಧಿಕಾರಿಗಳು ಸೇರಿದಂತೆ ಪತ್ರಕರ್ತರಿಗೆ ಹಾಗೂ ಜನಸಾಮಾನ್ಯರಿಗೂ ಕೂಡಾ ತೊಂದರೆ ಉಂಟಾಗುತ್ತಿದೆ. ರೈತರನ್ನು ಈ ರೀತಿಯಾಗಿ ನಡೆಸಿಕೊಳ್ಳುವುದು ಸೂಕ್ತವಲ್ಲ" ಎಂದು ತಿಳಿಸಿದ್ದಾರೆ.