ಬೆಂಗಳೂರು, ಫೆ.04 (DaijiworldNews/HR): "ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತರಾಗೋಣ" ಎಂದು ಕರೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ,"ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ನಾವೆಲ್ಲರೂ ಒಂದಾಗಿ ಸಮಾಜದಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬದಲಾವಣೆ ತರಲು ಪ್ರಯತ್ನಿಸೋಣ" ಎಂದರು.
ಇನ್ನು "ಕ್ಯಾನ್ಸರ್ ವಿರುದ್ಧ ಸಮರ ಸಾರಿರುವ ನಮ್ಮ ವೈದ್ಯಲೋಕದ ಸ್ಥೈರ್ಯವನ್ನು ಹೆಚ್ಚಿಸೋಣ, ಕ್ಯಾನ್ಸರ್ ನಿಂದ ಬಳಲುತ್ತಿರುವವರಲ್ಲಿ ಆತ್ಮವಿಶ್ವಾಸ ಮೂಡಿಸೋಣ" ಎಂದು ಕರೆ ನೀಡಿದ್ದಾರೆ.