ಪಿಲಿಭಿತ್, ಉತ್ತರಪ್ರದೇಶ,ಫೆ.05 (DaijiworldNews/HR): ರೈತನೊಬ್ಬ ಅಪಘಾತದಿಂದ ಮೃತಪಟ್ಟಿದ್ದು, ಆತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತ ಕುಟುಂಬವೊಂದರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆಂದು ತಿಳಿದು ಬಂದಿದೆ.
ಗಾಜಿಪುರದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ರೈತರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು, ಮೃತ ರೈತರ ಅಂತ್ಯಕ್ರಿಯೆ ಸಂಸ್ಕಾರದ ಸಮಯದಲ್ಲಿ ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇನ್ನು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೃತ ರೈತನ ತಾಯಿ ಮತ್ತು ಸಹೋದರ ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.