ಉದಯಪುರ, ಫೆ.05 (DaijiworldNews/HR): ವಿವಾಹವಾಗುವುದಾಗಿ ಹೇಳಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಲಾಲ್ ಭೀಲ್ ವಿರುದ್ಧ ಸುಖರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಾಂಧರ್ಭಿಕ ಚಿತ್ರ
"ದೂರು ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ" ಎಂದು ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.
ಇನ್ನು ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿರೆಂದು ಹೇಳಲಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎನ್ನಲಾಗಿದೆ.