ಮುಂಬೈ, ಫೆ.05 (DaijiworldNews/HR): ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ ರಾಜ್ಯದಾದ್ಯಂತ ಶಿವಸೇನಾ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಸಾಂಧರ್ಭಿಕ ಚಿತ್ರ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ನಾವು ಮೊದಲ ಬಾರಿಗೆ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ಕೇಂದ್ರ ಸರ್ಕಾರ ನಮ್ಮ ಮಾತನ್ನು ಕೇಳದಿದ್ದಲಿ ಮತ್ತೊಂದು ಕ್ರಮವನ್ನು ಕೈಗೊಳ್ಳಲಾಗುವುದು" ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇನ್ನು ಮಹಾರಾಷ್ಟ್ರದ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಿದ ಶಿವಸೇನಾ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ, ಗ್ಯಾಸ್ ಸಿಲಿಂಡರನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸಿ ಬಳಿಕ ಎತ್ತಿನ ಗಾಡಿ ಹಾಗೂ ಸೈಕಲ್ ಮೆರವಣಿಗೆ ನಡೆಸಿದ್ದಾರೆ ಎನ್ನಲಾಗಿದೆ.