ಬೆಂಗಳೂರು, ಫೆ.05 (DaijiworldNews/PY): "ಹಾವೇರಿಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ನಡೆಸಲು ಉದ್ದೇಶಿಸಕಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ" ಎಂದು ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, "ಇನ್ನೂ ಕೂಡಾ ಕನ್ನಡ ಹಬ್ಬದ ತಯಾರಿ ಪೂರ್ಣವಾಗಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಾರಣ ಕೊರೊನಾ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ತಿಂಗಳ ಅಂತ್ಯದಲ್ಲಿ ಕೊರೊನಾದ ಹೊಸ ನಿಯಮ ಜಾರಿಗೆ ಬಂದ ನಂತರ ಮಾರ್ಚ್ 9ಕ್ಕೆ ಇನ್ನೊಂದು ಸಭೆ ನಡೆಸಿ ಸಮ್ಮೇಳನದ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದಿದ್ದಾರೆ.
ಈ ಬಗ್ಗೆ ಸಚಿವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದ್ದಾರೆ. 86ನೇ ಕನ್ನಡ ಸಮ್ಮೇಳನದ ಅಧ್ಯಕ್ಷತೆಯನ್ನು ಸಾಹಿತಿ ದೊಡ್ಡರಂಗೇಗೌಡರು ವಹಿಸಿಕೊಳ್ಳಲಿದ್ದಾರೆ.