ದೆಹಲಿ, ಫೆ. 05 (DaijiworldNews/SM): ಕೃಷಿ ಕಾನೂನುಗಳ ವಿರುದ್ಧ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಲೋಕಸಭೆಯಲ್ಲೂ ಪ್ರತಿಪಕ್ಷಗಳು ಇದನ್ನೇ ಪ್ರಮುಖ ಅಸ್ತ್ರವನ್ನಾಗಿಟ್ಟುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ಕಾರಣದಿಂದಾಗಿ ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ.
ಬೆಳಿಗ್ಗೆ ಮುಂದೂಡಲ್ಪಟ್ಟ ಸದ ಮತ್ತೆ ಸಂಜೆ 4 ಗಂಟೆಗೆ ಸಭೆ ಸೇರಿದ ಸಂದರ್ಭದಲ್ಲೂ ಕೂಡ ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಡಿಎಂಕೆ ಸದಸ್ಯರು ಸದನಗ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಹೊಸ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಪೀಕರ್ ಓಂ ಬಿರ್ಲಾ ಅವರು, ವ್ಯಾಕ್ಸಿನೇಷನ್ಗೆ ಸಂಬಂಧಿಸಿದ ಪ್ರಮುಖ ವಿಷಯವೊಂದನ್ನು ಚರ್ಚಿಸಲಾಗುತ್ತಿರುವುದರಿಂದ ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸುವಂತೆ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು. ಆದರೂ ಕಾಂಗ್ರೆಸ್, ಡಿಎಂಕೆ ಮತ್ತು ಎಡ ಪಕ್ಷಗಳು ಘೋಷಣೆ ಕೂಗುವುದನ್ನು ಮುಂದುವರೆಸಿದ್ದರಿಂದ ಸ್ಪೀಕರ್ ಓಂ ಬಿರ್ಲಾ ಅವರು ಸುಮಾರು ಕಲಾಪವನ್ನು ಸಂಜೆ 6 ಗಂಟೆಗೆ ಮುಂದೂಡಿದರು.
ಸಂಜೆ 6 ಗಂಟೆಗೆ ಕಲಾಪ ಮತ್ತೆ ಆರಂಭವಾದಾಗಲೂ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದರಿಂದ ಸ್ಪೀಕರ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.