ಅಮರಾವತಿ, ಫೆ.06 (DaijiworldNews/PY): ಮಾರ್ಚ್ 4ರಂದು, ಕೇಂದ್ರ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ತಿರುಪತಿಯನ್ನು ನಡೆಯಲಿದೆ.
ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ, ಕೇರಳ, ತಮಿಳುನಾಡು ಈ ಪರಿಷತ್ತಿನ ಸದಸ್ಯ ರಾಜ್ಯಗಳು. ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ವಿಶೇಷ ಆಹ್ವಾನಿತ ಪ್ರದೇಶಗಳಾಗಿವೆ.
ಮಾರ್ಚ್ 4ರಂದು ತಿರುಪತಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸದಸ್ಯ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಮುಖ್ಯ ಕಾರ್ಯದರ್ಶಿಗಳು, ಸಲಹೆಗಾರರು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು, ಇತರ ಹಿರಿಯ ಅಧಿಕಾರಿಗಳು ಹಾಗೂ 100 ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಹೇಳಿದೆ.