ಅಮರಾವತಿ, ಫೆ.06 (DaijiworldNews/HR): "ಪೂರ್ವ ಲಡಾಖ್ ಗಡಿಯಲ್ಲಿ ಸಂಘರ್ಷವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರು ಕೂಡ ವಾಸ್ತವದಲ್ಲಿ ಅದು ಕಾರ್ಯರೂಪಕ್ಕೆ ಬಂದಿರುವುದು ಗೋಚರಿಸುತ್ತಿಲ್ಲ" ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದು ಬಹಳ ಸಂಕೀರ್ಣವಾದ ವಿಷಯವಾಗಿದ್ದು, ಯಾವ ಭೌಗೋಳಿಕ ಪ್ರದೇಶದಲ್ಲಿ ಯಾವ ಸ್ಥಳದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಮೊದಲು ಅರಿತುಕೊಂಡು ಈ ಎಲ್ಲ ವಿಚಾರಗಳನ್ನು ಸೇನೆಯ ಕಮಾಂಡರ್ಗಳು ನಿರ್ವಹಿಸುತ್ತಿದ್ದಾರೆ" ಎಂದರು.
ಇನ್ನು "2020 ಮೇ 5 ರಂದು ಪೂರ್ವ ಲಡಾಖ್ನಲ್ಲಿ ಚೀನಾ ಮತ್ತು ಭಾರತ ಸೇನೆಗಳು ಸೇರಿದ್ದು, ಎರಡು ದೇಶಗಳ ಸೈನಿಕರ ನಡುವೆ ಘರ್ಷಣೆಯೂ ನಡೆದಿತ್ತು. ಗಡಿಯಿಂದ ನಿಯೋಜಿತ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಸಂಬಂಧ ಎರಡು ದೇಶಗಳ ರಾಜತಾಂತ್ರಿಕ ಮತ್ತು ಸೇನಾ ಕಮಾಂಡರ್ಗಳ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆ ನಡೆದಿತ್ತು, ಆದರೆ ಆಮೇಲೆ ಯಾವುದೇ ಮಹತ್ವದ ಪ್ರಗತಿ ಕಂಡು ಬಂದಿಲ್ಲ ಎನ್ನಲಾಗಿದೆ.