ಬೆಂಗಳೂರು, ಫೆ.06 (DaijiworldNews/HR): "ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ನಲ್ಲಿ ಇರಬಹುದು. ಶಾಸಕರು ಯಾವುದೇ ನೋವು, ಗೊಂದಲ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿಯವರಲ್ಲಿ ಹೇಳಿಕೊಳ್ಳಬಹುದು" ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾಯಕತ್ವ ಬದಲಾವಣೆ ಮಾಡುವುದಿದ್ದರೆ ಮಾಧ್ಯಮಕ್ಕೆ ಮಾಹಿತಿ ನೀಡುತ್ತೇವೆ, ಆದರೆ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ" ಎಂದರು.
ಇನ್ನು "ಯಾವುದೇ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ಯಾರೋ ಒಬ್ಬರು ಅಥವಾ ಇಬ್ಬರು ಹೇಳಿಕೆ ಕೊಡುತ್ತಿದ್ದಾರೆ. ಆ ಬಗ್ಗೆ ರಾಜ್ಯಾಕ್ಷರು ಹಾಗೂ ಸಂಬಂಧಿಸಿದ ನಾಯಕರು ಗಮನ ಹರಿಸಿದ್ದಾರೆ" ಎಂದು ಹೇಳಿದ್ದಾರೆ.