ನವದೆಹಲಿ,ಫೆ.06 (DaijiworldNews/HR): "ದೆಹಲಿಯ ಶಾಹೀದಿ ಪಾರ್ಕ್ ಬಳಿ ರೈತರ 'ಚಕ್ಕಾ ಜಾಮ್' ಬೆಂಬಲಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸುಮಾರು 50 ಜನರನ್ನು ಬಂಧಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ರೈತರು ಶನಿವಾರ ದೇಶವ್ಯಾಪಿ 'ಚಕ್ಕಾ ಜಾಮ್' ಪ್ರತಿಭಟನೆಗೆ ಕರೆ ನೀಡಿದ್ದು, ಇದಕ್ಕೆ ಬೆಂಬಲಿಸಿ ಮಧ್ಯ ದೆಹಲಿಯ ಶಾಹೀದಿ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 50 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2020 ನವೆಂಬರ್ 26ರಿಂದ ಆರಂಭವಾಗಿರುವ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್ ಟಿಕಾಯತ್ ಮುನ್ನಡೆಸುತ್ತಿದ್ದು, ಜನವರಿ 26 ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಹಿಂಸಾಚಾರ ನಡೆದಿತ್ತು.
ಇನ್ನು ರೈತರ ಪ್ರತಿಭಟನೆಯಿಂದಾಗಿ ಗಾಜಿಪುರ, ಟಿಕ್ರಿ ಹಾಗೂ ಸಿಂಘು ಪ್ರತಿಭಟನಾ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.