ಉತ್ತರಾಖಂಡ, ಫೆ. 07 (DaijiworldNews/SM): ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಹಿಮಪರ್ವತ ಕುಸಿತದ ಅವಘಡದ ಸಂದರ್ಭ ಸುರಂಗದಲ್ಲಿ ಸಿಲುಕಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ.
ಹಿಮ ಪ್ರವಾಹದಲ್ಲಿ ಬರೋಬ್ಬರಿ 150 ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ. ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರುಪಾಯಿ ಘೋಷಿಸಿದ್ದಾರೆ. ಮತ್ತೊಂದೆಡೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಘೋಷಿಸಲಾಗಿದೆ. ಅಲ್ಲದೆ, ಗಾಯಗೊಂಡಿರುವವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.