ಚೆನ್ನೈ, ಫೆ. 08 (DaijiworldNews/HR): ತಮಿಳು ಖ್ಯಾತ ನಟ ಸರ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನನಗೆ ಕೊರೊನಾ ಸೋಂಕು ಡ್ರೂಢಪಟ್ಟಿದ್ದು, ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
ಇನ್ನು ಕೊರೊನಾ ಬಗ್ಗೆ ನಾವು ಜಾಗರೂಕರಾಗಿರಬೇಕು, ಸುರಕ್ಷಿತವಾಗಿರಬೇಕು ಎಂದು ಹೇಳಿದ್ದು, ಚಿಕಿತ್ಸೆ ನೀಡಿದ ವೈದ್ಯರು ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.