ಮಾಗಡಿ, ಫೆ. 08 (DaijiworldNews/HR): ಮಾಧ್ಯಮಗಳು ನನ್ನನ್ನು ಸೂಪರ್ ಸಿಎಂ ಎಂದು ಬಿಂಬಿಸುತ್ತಿವೆ, ಆದರೆ ನಾನು ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಅಷ್ಟೇ" ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಸಿದ್ದಲಿಂಗೇಶ್ವರರ ಮೂರನೇ ವರ್ಷದ ಜಯಂತ್ಯುತ್ಸವ ಮತ್ತು ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವ್ಅರು,"ಮಾಧ್ಯಮಗಳು ನನ್ನನ್ನು ಸೂಪರ್ ಸಿಎಂ ಎಂದು ಬಿಂಬಿಸುತ್ತಿವೆ, ಆದರೆ,ನಾನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ನಾನೊಬ್ಬ ಬಿಜೆಪಿ ಕಾರ್ಯಕರ್ತ ಅಷ್ಟೇ" ಎಂದರು.
ಇನ್ನು "ರೈತರ ಕಣ್ಣೀರು ಒರೆಸಲು ಹಳ್ಳಿಗಳನ್ನು ಸುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದು ಜಾತಿಗೆ ಸೀಮಿತರಾಗದೆ ಎಲ್ಲಾ ಜಾತಿಯ ಮಠಮಾನ್ಯಗಳಿಗೆ ಅನುದಾನ ನೀಡಿದ್ದು, ಬಡವರ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ, 108 ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ" ಎಂದು ಹೇಳಿದ್ದಾರೆ.