ಮೈಸೂರು, ಫೆ. 08 (DaijiworldNews/HR): "ವಿಧಾನಸೌಧದಲ್ಲಿ 10ನೇ ಚಾಮರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಫೋಟೋಗಳನ್ನು ಅಳವಡಿಸುವ ಬಗ್ಗೆ ನಾನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ" ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮನವಿ ಬಗ್ಗೆ ತಕ್ಷಣ ಸ್ಪಂದನೆ ನೀಡಿದ್ದಲ್ಲದೆ, ತಾವೂ ಸಹ ಮೈಸೂರಿನ ಅಭಿವೃದ್ಧಿಗೆ ಇವರ ಕೊಡುಗೆ ಬಗ್ಗೆ ತಿಳಿದಿದ್ದೇನೆ. ಹೀಗಾಗಿ ವಿಧಾನಸಭೆಯಲ್ಲಿ ಫೋಟೋ ಅಳವಡಿಸಲು ಕ್ರಮ ವಹಿಸುತ್ತೇನೆ ಎಂದಿದ್ದಾರೆ" ಎಂದು ಸಚಿವರು ತಿಳಿಸಿದ್ದಾರೆ.
ಇನ್ನು "ವಿಧಾನಸೌಧದಲ್ಲಿ 10ನೇ ಚಾಮರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಫೋಟೋಗಳನ್ನು ಅಳವಡಿಸಬೇಕೆಂದು ನಾನು ಖುದ್ದಾಗಿ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಮನವಿ ಮಾಡಿದ್ದು, ಅವರ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ" ಎಂದರು.