ಬೆಂಗಳೂರು, ಫೆ. 08 (DaijiworldNews/SM): ಪ್ರತಿ ಪಕ್ಷದ ತೀವ್ರ ವಿರೋಧದ ನಡುವೆಯೇ ವಿಧಾನ ಪರಿಷತ್ ನಲ್ಲೂ ಕೂಡ ಗೋ ಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸಿಕೊಂಡ ಬಿಜೆಪಿ ಸರಕಾರ ಅದಕ್ಕೆ ಅನುಮೋದನೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರೋಧದ ನಡುವೆಯೇ ಕಾಯ್ದೆ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವ ಮೂಲಕ ಬಿಜೆಪಿಯ 'ದಳ' ಮೇಲಾಗಿದ್ದು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಹಿನ್ನಡೆಯಾಗಿದೆ.
ಇನ್ನು ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕಾರಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು ಮಸೂದೆಯ ಪ್ರತಿಗಳನ್ನು ಹರಿದು ಹಾಕಿದ್ದಾರೆ.
ಇದರಿಂದಾಗಿ ಸದನದಲ್ಲಿ ಗದ್ದಲ ಏರ್ಪಟ್ಟಿದೆ. ಇದರಿಂದಾಗಿ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.