ತಿರುವನಂತಪುರ, ಫೆ.10 (DaijiworldNews/MB) : ದೇಶದಲ್ಲಿ ಮೊದಲ ಕೊರೊನಾ ಪ್ರಕರಣ ಕಾಣಿಸಿಕೊಂಡ ಕೇರಳದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಒಂದೇ ಟ್ಯೂಷನ್ನ 91 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದೆ.
ಕೇರಳದ ಮಲಪ್ಪುರಂನ 2 ಶಾಲೆಗಳಲ್ಲಿನ 192 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಆದರೆ ಈ ಪೈಕಿ 91 ವಿದ್ಯಾರ್ಥಿಗಳು ಒಂದೇ ಟ್ಯೂಷನ್ನ ವಿದ್ಯಾರ್ಥಿಗಳು ಎಂಬ ವಿಚಾರ ಬೆಳಕಿಗೆ ಬಂದಿದ್ದು, ಈಗ ಟ್ಯೂಷನ್ ಸೆಂಟರನ್ನು ಸೀಲ್ಡೌನ್ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಅಧಿಕಾರಿ ರಮೇಶ್ ಕುಮಾರ್ ಅವರು, ಈ ಟ್ಯೂಷನ್ ಸೆಂಟರ್ಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಮನೆಯಲ್ಲೇ ಇರುವಂತೆ ತಿಳಿಸಲಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ ಕೇರಳದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳು ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹೊಂದುವುದು ಕಡ್ಡಾಯ ಎಂದು ವರದಿಯಾಗಿದೆ.