ಡೆಹ್ರಾಡೂನ್, ಫೆ.10 (DaijiworldNews/MB) : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾದ ಹಿಮ ಪ್ರವಾಹದಿಂದ ಕಾರಣ 13 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32 ಕ್ಕೆ ಏರಿಕೆಯಾಗಿದ್ದು ಸುಮಾರು 206 ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಧುಲಿಗಂಗಾ ನದಿ ಪ್ರದೇಶದಲ್ಲಿರುವ ಜುಗ್ಜು, ಜುವಾಗ್ವಾಡ್, ಭನ್ಯಾಲ್, ಗಹಾರ್ ಸೇರಿದಂತೆ ಹಲವು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ. ರಸ್ತೆ ಸಂಪರ್ಕ ಕಳೆದುಕೊಂಡಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಲು ಹೆಲಿಕಾಪ್ಟರ್ಗಳನ್ನು ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಇನ್ನು ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.