ಸಹರಾನ್ಪುರ, ಫೆ.10 (DaijiworldNews/PY): "ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇಂದು ಕಾಂಗ್ರೆಸ್ ಆಯೋಜಿಸಿದ್ದ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಾತನಾಡಿದ ಅವರು, "ಪ್ರತಿಭಟನಾನಿರತ ರೈತರನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿ ಅವಮಾನಿಸುತ್ತಿದೆ" ಎಂದಿದ್ದಾರೆ.
"ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಿದೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ತನಕ ಪಕ್ಷ ಹೋರಾಟ ನಡೆಸಲಿದೆ" ಎಂದು ತಿಳಿಸಿದ್ದಾರೆ.