ಬೆಂಗಳೂರು,ಫೆ.11(DaijiworldNews/HR): "ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾದಾಗ ಹೋರಾಟ ಸೃಷ್ಟಿಯಾಗುತ್ತದೆ ಮತ್ತು ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ" ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಕುರಿತು ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ ಅವರು, "ಸಿದ್ದರಾಮಯ್ಯ ಮತ್ತು ನಾನು 1989 ರಿಂದಲೂ ಆತ್ಮೀಯರಾಗಿದ್ದು, ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಕೇವಲ ಅಂತೆಕಂತೆ ಅಷ್ಟೇ. ಪ್ರಜಾಪ್ರಭುತ್ವಕ್ಕೆ ಏನಾದರು ಅಪಾಯ ಬಂದಾಗಲೆಲ್ಲಾ ನಾವು ಹೋರಾಟ ಮಾಡಿದ್ದೇವೆ" ಎಂದು ಹೇಳಿದ್ದಾರೆ.