ನವದೆಹಲಿ, ಫೆ.11 (DaijiworldNews/MB) : ಅಸ್ಸಾಂನಲ್ಲಿ ಸಿಎಎ ವಿರುದ್ಧ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಗೊಗೋಯಿ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಗುವಾಹಟಿ ನ್ಯಾಯಾಲಯ ತಿರಸ್ಕರಿಸಿದ್ದು, ಇದನ್ನು ಪ್ರಶ್ನಿಸಿ ಗೊಗೋಯಿಯವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಸೂರ್ಯ ಕಾಂತ್ ಹಾಗೂ ಅನಿರುದ್ಧ್ ಬೋಸ್ ಅವರಿದ್ದ ಪೀಠವು, ಅರ್ಜಿಯನ್ನು ನಾವು ಈ ಹಂತದಲ್ಲಿ ಪರಿಗಣಿಸಲಾಗದು ಎಂದು ಹೇಳಿದ್ದು ಜಾಮೀನು ನೀಡಲು ನಿರಾಕರಿಸಿದ್ದಾರೆ. ಆದರೆ ಅರ್ಜಿದಾರರು ಜಾಮೀನು ಪಡೆಯಲು ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಅರ್ಜಿದಾರರ ಪರ ವಕೀಲ ರಣಮೋನಿ ಭುಯಾನ್ಗೆ ಸುಪ್ರೀಂಕೋರ್ಟ್ ತಿಳಿಸಿದೆ.