ಚಮೋಲಿ, ಫೆ.11(DaijiworldNews/HR): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದ ಪರಿಣಾಮ ಸಂಭವಿಸಿರುವ ಪ್ರವಾಹದಲ್ಲಿ ಗುರುವಾರದವರೆಗೆ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, 204 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸಚಿವಾಲಯ ತಿಳಿಸಿದೆ.
34 ಮೃತದೇಹಗಳ ಪೈಕಿ 10 ಮಂದಿಯನ್ನು ಗುರುತಿಸಲಾಗಿದ್ದು, 24 ಮೃತದೇಹವನ್ನು ಗುರುತಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಇನ್ನು ತಪೋವನ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಇನ್ನು ಕೆಲವು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಟಟೆಡ್ ಕೊರೆಯುವ ಯಂತ್ರದೊಂದಿಗೆ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಮಗ್ನವಾಗಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಡಿಐಜಿ ಅಪರ್ಣಾ ಕುಮಾರ್ ಮಾಹಿತಿ ನೀಡಿದ್ದಾರೆ.
ಅವಶೇಷಗಳು ಕೆಸರಿನಿಂದ ಕೂಡಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗುತ್ತಿದ್ದು, ಸೇನೆ ಹಾಗೂ ರಕ್ಷಣಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸುತ್ತಿದೆ.