ನವದೆಹಲಿ,ಫೆ.12 (DaijiworldNews/HR): ಸುಳ್ಳು ಸುದ್ದಿ ಹಾಗೂ ನಕಲಿ ಖಾತೆಗಳ ಮೂಲಕ ಪ್ರಚೋದನಾತ್ಮಕ ವಿಷಯಗಳನ್ನು ಹರಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತು ಟ್ವಿಟರ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ ಎನ್ನಲಾಗಿದೆ.
ಸುಳ್ಳು ಸುದ್ದಿ ಹರಡುವಿಕೆ ತಡೆಯುವ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ.
ಇನ್ನು ಟಿಕ್ಟಾಕ್ ಮತ್ತು ರೆಡ್ಡಿಟ್ಗೆ ಹೋಲಿಸಿದರೆ ಸಾಮಾಜಿಕ ತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸುವ ವಿಚಾರದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ ತುಂಬಾ ಹಿಂದುಳಿದಿವೆ ಎಂದು ಇತ್ತೀಚೆಗೆ ವರದಿಯಾಗಿದ್ದು ಎನ್ನಲಾಗಿದೆ.