ನವದೆಹಲಿ, ಫೆ.12 (DaijiworldNews/PY): ತೃಣಮೂಲ ಕಾಂಗ್ರೆಸ್ ಸಂಸದ ದಿನೇಶ್ ತ್ರಿವೇದಿ ಅವರು, ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ಘಟನೆಗಳಿಂದ ಬೇಸತ್ತು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ದಿನೇಶ್ ತ್ರಿವೇದಿ ಅವರು, "ನಾನು ಇಂದು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದೆ. ನನ್ನಿಂದ ಇಲ್ಲಿ ಏನೂ ಮಾತನಾಡಲು ಸಾಧ್ಯವಾಗುತ್ತಿಲ್ಲ" ಎಂದಿದ್ದಾರೆ.
"ಇಲ್ಲಿಗೆ ನನ್ನನ್ನು ಕಳುಹಿಸಿರುವ ನನ್ನ ಪಕ್ಷಕ್ಕೆ ಕೃತಜ್ಞತೆಗಳು. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ನನ್ನಿಂದ ಏನೂ ಮಾಡಲು ಆಗುತ್ತಿಲ್ಲ. ಇಲ್ಲಿ ಕುಳಿತುಕೊಂಡು ಏನನ್ನೂ ಮಾಡಲು ಸಾಧ್ಯವಾಗದಿದ್ದಲ್ಲಿ ರಾಜೀನಾಮೆ ನೀಡಬೇಕು ಎಂದು ನನ್ನ ಆತ್ಮ ಹೇಳುತ್ತಿದೆ. ಹಾಗಾಗಿ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ತಿಳಿಸಿದ್ದಾರೆ.
"ಆದರೆ, ನಾನು ಪಶ್ವಿಮ ಬಂಗಾಳದ ಜನತೆಗಾಗಿ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ" ಎಂದಿದ್ದಾರೆ.