ಬೆಂಗಳೂರು, ಫೆ.12 (DaijiworldNews/PY): ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ನೋಟಿಸ್ನಲ್ಲಿ, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದು, ಏಕೆ ನಿಮ್ಮ ವಿರುದ್ದ ಕ್ರಮ ಕೈಗೊಳ್ಳಬಾರದು? ಎಂದು ಪ್ರಶ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸ್ಥಾನ ಸಿಗದಿದ್ದ ಹಿನ್ನೆಲೆ ಅಸಮಾಧಾನಗೊಂಡಿದ್ದ ಯತ್ನಾಳ್ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಹೇಳಿಕೆಗಳನ್ನು ನೀಡುತ್ತಿದ್ದರು. ಸಿಎಂ ಬದಲಾವಣೆ ವಿಚಾರದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್ ಅವರು, "ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ. ಮುಂದಿನ ಸಿಎಂ ಉತ್ತರ ಕರ್ನಾಟಕದವರೇ ಆಗುತ್ತಾರೆ" ಎಂದು ಹೇಳುತ್ತಿದ್ದರು.