ಬೆಂಗಳೂರು, ಫೆ.12 (DaijiworldNews/HR): "ನನ್ನ ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡುತ್ತಾರಾ? ನನಗೆ ಈಗ ಕೂಡ ಜೀವ ಬೆದರಿಕೆಯಿದೆ" ಎಂದು ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.
ಈ ಕುರಿತು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ಗೆ ಬೇಲ್ ಸಿಕ್ಕ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಹೋರಾಟ ಮುಂದುವರಿಯಲಿದ್ದು, ಸಂಪತ್ ರಾಜ್ ಮೇಲೆ ಕ್ರಮಕ್ಕೆ ನಾನು ಒತ್ತಡ ತಂದಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡಿದ್ದೇವೆ. ಆದರೂ ಅಧ್ಯಕ್ಷರು ಏನೂ ಕ್ರಮ ತೆಗೆದುಕೊಂಡಿಲ್ಲ" ಎಂದರು.
"ಇನ್ನು ನ್ಯಾಯಾಲಯದ ಜಾಮೀನಿನ ಬಗ್ಗೆ ನಾನೇನು ಮಾತನಾಡುವುದಿಲ್ಲ. ಅದನ್ನು ನಾನು ಒಪ್ಪುತ್ತೇನೆ. ಆದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಾನು ದೇವರನ್ನು ನಂಬಿದ್ದೇನೆ. ಆ ದೇವರು ಶಿಕ್ಷೆ ಕೊಡಬೇಕು" ಎಂದು ಹೇಳಿದ್ದಾರೆ.