ಬಾಗಲಕೋಟೆ, ಫೆ.12 (DaijiworldNews/HR): "ಬಳ್ಳಾರಿ ಜಿಲ್ಲೆ ವಿಭಜನೆಯಿಂದ ಮಂಕಾಗಿಲ್ಲ, ಚೆಂಡಿನಂತೆ ಪುಟಿದು ಮೇಲೆ ಬರುವ ಶಕ್ತಿ ನನಗಿದೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಬಳ್ಳಾರಿ ಜಿಲ್ಲೆ ವಿಭಜನೆಯಿಂದ ಸಚಿವ ಆನಂದಸಿಂಗ್ ಮೇಲುಗೈ ಸಾಧಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಬಳ್ಳಾರಿ ಜಿಲ್ಲೆ ವಿಭಜನೆಯಿಂದ ನಾನು ಮಂಕಾಗಿಲ್ಲ, ಚೆಂಡಿನಂತೆ ಪುಟಿದು ಮೇಲೆ ಬರುವ ಶಕ್ತಿ ನನಗಿದೆ" ಎಂದರು.
ಇನ್ನು "ಕಾಂಗ್ರೆಸ್ ಭದ್ರಕೋಟೆ ಆಗಿದ್ದ ಬಳ್ಳಾರಿ ಜಿಲ್ಲೆಯಲ್ಲಿ ಇಂದು ಆ ಪಕ್ಷವನ್ನು ಒಬ್ಬ ಶ್ರೀರಾಮುಲು ಎನ್ನುವ ವ್ಯಕ್ತಿ ನೆಲಸಮ ಮಾಡಿದ್ದಾನೆ ಅಂದರೆ ಅದು ಬಿಜೆಪಿಯ ಶಕ್ತಿ. ನನ್ನನ್ನು ಯಾರೂ ಕೂಡ ಕುಗ್ಗಿಸಲು ಆಗಲ್ಲ. ನಾನು ಕೇವಲ ಒಂದು ತಾಲೂಕು, ಜಿಲ್ಲೆಯ ಲೀಡರ್ ಅಲ್ಲ ರಾಜ್ಯ ಮಟ್ಟದ ಲೀಡರ್ ಆಗಿದ್ದೇನೆ. ಚಂಡು ನೆಲಕ್ಕೆ ಒಗೆದಾಗ ಹೇಗೆ ಪುಟಿಯುತ್ತದೆಯೋ ಹಾಗೆಯೇ ಚೆಂಡಿನಂತೆಯೇ ವೇಗವಾಗಿ ಮೇಲೆ ಜಿಗಿಯುವ ಶಕ್ತಿಯನ್ನು ದೇವರು ಮತ್ತು ನಾಡಿನ ಜನರು ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.