ವಿರುಧುನಗರ, ಫೆ. 12 (DaijiworldNews/HR): ತಮಿಳುನಾಡಿನಲ್ಲಿ ವೆಂಬಕೊಟ್ಟೈನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿ, 22 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಫೆ.12 ರಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಮೃತಪಟ್ಟ 11 ಜನರ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ 10 ಕೋಠಡಿಗಳು ನಾಶವಾಗಿದ್ದು, ಘಟನೆ ನಡೆದಾಗ ಕನಿಷ್ಟ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೇಶನ್ ತಿಳಿಸಿದ್ದು, ಘಟನೆಗೆ ನಿಕಣ ಕಾರಣ ಇನ್ನಷ್ಟೇ ತಿಳಿಯಬೇಕೆದೆ.