ಬೆಂಗಳೂರು,ಫೆ.13 (DaijiworldNews/HR): ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡಬೇಕು, ಸಾಕ್ಷ್ಯ ನಾಶಕ್ಕೆ ಪ್ರಯತ್ನ ಮಾಡಬಾರದು ಮತ್ತು ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ನಗರ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ ಎನ್ನಲಾಗಿದೆ.
ಇನ್ನು ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸುವಂತೆ ಸಿಸಿಬಿ ಪೊಲೀಸರು ಯಾವಾಗ ಬೇಕಿದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕೂಡ ಪೀಠ ಹೇಳಿದೆ.