ಚೆನ್ನೈ, ಫೆ.13 (DaijiworldNews/PY): ತಮಿಳುನಾಡಿನಲ್ಲಿ ವೆಂಬಕೊಟ್ಟೈನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಪಟಾಕಿಗಳನ್ನು ತಯಾರಿಸಲು ಕೆಲ ರಾಸಾಯನಿಕಗಳನ್ನು ಬೆರೆಸುತ್ತಿರುವ ಸಂದರ್ಭ ಈ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಾಕಿ ಘಟಕದಲ್ಲಿ ಸ್ಪೋಟ ಸಂಭವಿಸಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ಸಿಎಂ ಅವರ ಸಾರ್ವಜನಿಕ ಪರಿಹಾರ ನಿಧೊಯಿಂದ ತಲಾ 3 ಲಕ್ಷ ರೂ. ಪರಿಹಾರ ನೀಡಿವುದಾಗಿ ಸಿಎಂ ಕೆ.ಪಳನಿಸ್ವಾಮಿ ಘೋಷಿಸಿದ್ದು, ತನಿಖೆಗೂ ಆದೇಶಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ. ರೂ. ಪರಿಹಾರ ಘೋಷಣೆ ಮಾಡಿದ್ದಾರೆ.