ನೊಯ್ಡಾ, ಫೆ.13 (DaijiworldNews/PY): ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಘಟನೆಯಲ್ಲಿ 12 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಶನಿವಾರ ತಿಳಿದುಬಂದಿದೆ.
ದಟ್ಟ ಮಂಜು ಆವರಿಸಿದ ಕಾರಣ ಆರು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು, ಈ ಘಟನೆ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದೆ.
ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.