ಚಂಡೀಗಢ, ಫೆ.13 (DaijiworldNews/MB) : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ 72 ವರ್ಷದ ಪಂಜಾಬ್ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ರೈತನನ್ನು ಮೊಗಾ ಜಿಲ್ಲೆಯ ನಿವಾಸಿ ಹನ್ಸಾ ಸಿಂಗ್ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ನವೆಂಬರ್ 26 ರಿಂದ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.