ಕರ್ನೂಲ್, ಫೆ.14 (DaijiworldNews/PY): ಆಂದ್ರಪ್ರದೇಶದ ಕರ್ನೂಲ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.
ವ್ಯಾನ್ ಹಾಗೂ ಟ್ರಕ್ ಮಧ್ಯೆ ಅಪಘಾತ ಸಂಭವಿಸಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾದರ್ಪುರ ಗ್ರಾಮದ ಸಮೀಪ ಈ ಅಪಘಾತ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.