ಅಥಣಿ, ಫೆ.14 (DaijiworldNews/PY): ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯಕ್ಕಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಅವರು, "ದೇಶದ ಜನತೆ ಸುಪ್ರೀಂ ಕೋರ್ಟ್ನ ತೀರ್ಪಿನಂತೆ ರಾಮ ಮಂದಿರ ನಿರ್ಮಾಣದ ಆದೇಶವನ್ನು ಸ್ವಾಗತಿಸಿದ್ದಾರೆ. ಹಾಗಾಗಿ ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರದ ಹಣ ಬೇಡ. ಬದಲಾಗಿ, ಜನರ ಹಣದಿಂದ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಾರೆ" ಎಂದರು.
"ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯಕ್ಕಾಗಿ ದೇಶದಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗುತ್ತಿದ್ದು, ಇದರಲ್ಲಿ ನನ್ನ ಅಳಿಲು ಸೇವೆಯಾಗಿ 10 ಲಕ್ಷ ರೂ. ದೇಣಿಗೆಯಾಗಿ ನೀಡುತ್ತಿರುವುದು ನನ್ನ ಸೌಭಾಗ್ಯವಾಗಿದೆ" ಎಂದು ತಿಳಿಸಿದರು.