ತಿರುವನಂತಪುರಂ,ಫೆ. 14 (DaijiworldNews/HR): "ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುವುದಿಲ್ಲ ಎಂದು ನಾನು ಮತ್ತೆ ಪುನರುಚ್ಚರಿಸುತ್ತಿದ್ದೇನೆ" ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ಕೊರೊನಾ ಲಸಿಕೆ ಅಭಿಯಾನವು ಮುಕ್ತಾಯವಾದ ಬಳಿಕ ಸಿಎಎ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದು, ನಾವು ಕೇರಳದಲ್ಲಿ ಯಾವುದೇ ಕಾರಣಕ್ಕೂ ಈ ನಿಯಮವನ್ನು ಜಾರಿಗೆ ತರುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು "ಸಿಎಎ ಕಾಯ್ದೆ ಜಾರಿಗೆ ಬರುವುದಿಲ್ಲ ಎಂದು ನಾವು ಹೇಳಿದರೆ, ಅದು ಕಾರ್ಯಗತವಾಗುವುದಿಲ್ಲ ಎಂದರ್ಥ. ನಾನು ಅದನ್ನು ಪುನರುಚ್ಚರಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಪೂರ್ಣಗೊಂಡ ಬಳಿಕ ಸಿಎಎ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದರು.