ತಪೋವನ, ಫೆ.15 (DaijiworldNews/HR): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಪ್ರವಾಹದ ತೀವ್ರತೆ ಸಿಲುಕಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರದಂದು ಅವಶೇಷಗಳ ಅಡಿಯಿಂದ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಚಮೋಲಿ ಜಿಲ್ಲೆಯ ಆದಿತಿ ಸುರಂಗ ಹಾಗೂ ಎನ್ಟಿಪಿಸಿಯ ತಪೋವನ-ವಿಷ್ಣುಗಡ ಯೋಜನೆ ಪ್ರದೇಶದಿಂದ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವಾತಿ ಎಸ್. ಭದೋರಿಯಾ ತಿಳಿಸಿದ್ದಾರೆ.
ಇನ್ನು ಫೆಬ್ರವರಿ 7ರಂದು ನೀರ್ಗಲ್ಲು ಕುಸಿತ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿ ದುರಂತ ಸಂಭವಿಸಿದ್ದು, ಅದರಲ್ಲಿ ಸುಮಾರು 151 ಮಂದಿ ಈಗಲೂ ನಾಪತ್ತೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.