ಬೆಂಗಳೂರು, ಫೆ.15 (DaijiworldNews/PY): ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಮಾಡಿದೆ.
ಕೃಷಿ ಇಲಾಖೆಯ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸುವ ಸಲುವಾಗಿ ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಕೃಷಿ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲು ಯಾವುದೇ ಸಂಭಾವನೆ ಪಡೆದುಕೊಳ್ಳದೇ ದುಡಿಯುವುದಾಗಿ ದರ್ಶನ್ ಅನುಮತಿಸಿದ್ದರು. ಅಲ್ಲದೇ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಕೂಡಾ ದರ್ಶನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಸ್ವತಃ ಕೃಷಿಕರೂ ಆಗಿರುವ ದರ್ಶನ್ ಅವರು ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿ ತಮ್ಮ ಮನದ ಇಂಗಿತವನ್ನು ತಿಳಿಸಿದ್ದರು. ಈ ಹಿನ್ನೆಲೆ ಇದೀಗ ಸರ್ಕಾರ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.