ನವದೆಹಲಿ, ಫೆ.16 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಅಜ್ಮೀರ್ ದರ್ಗಾಕ್ಕೆ ಅರ್ಪಿಸಲು ಚಾದರವೊಂದನ್ನು ನೀಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಹಸ್ತಾಂತರಿಸಿದ್ದಾರೆ.
ಪ್ರಧಾನಿ ಮೋದಿ ಅವರ ಪರವಾಗಿ ಈ ಚಾದರವನ್ನು ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಅರ್ಪಿಸಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, "ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ 809ನೇ ಉರೂಸ್ ವೇಳೆ ಅಜ್ಮೀರ್ ಷರೀಫ್ ದರ್ಗಾಕ್ಕೆ ನೀಡಲು ಚಾದರ್ ಅನ್ನು ಹಸ್ತಾಂತರಿಸಿದ್ದೇನೆ" ಎಂದಿದ್ದಾರೆ.