ಮುಂಬೈ, ಫೆ.16 (DaijiworldNews/HR): ಮಹಾರಾಷ್ಟ್ರದ ಮುಂಬೈ- ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಸರಣಿ ಅಪಘಾತದ ಸಂಭವಿಸಿ ಐವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಮುಂಬೈ- ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಈ ಘಟನೆಯು ಸಂಭವವಿಸಿದ್ದು, ಹೆದ್ದಾರಿಯಲ್ಲಿ ಅನೇಕ ವಾಹನಗಳು ಸರಣಿಯಾಗಿ ಒಂದಕ್ಕೊಂದು ಢಿಕ್ಕಿಯಾಗಿದ್ದು, ವಾಹನಗಳಲ್ಲಿದ್ದವರ ಪೈಕಿ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.