ಪುದುಚೇರಿ, ಫೆ.16 (DaijiworldNews/MB) : ಪುದುಚೇರಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಇರುವಾಗ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.
ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದ ಶಾಸಕ ಮಲ್ಲಾಡಿ ಕೃಷ್ಣ ರಾವ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಕಾಮರಾಜ್ ನಗರ ಶಾಸಕ ಎ ಜಾನ್ ಕುಮಾರ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಶಾಸಕ ಮಲ್ಲಾಡಿ ಕೃಷ್ಣ ರಾವ್ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೋಮವಾರ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿದ್ದಾರೆ.
ಮಲ್ಲಾಡಿ ಕೃಷ್ಣ ರಾವ್ ಅವರು ತಾವು ರಾಜೀನಾಮೆ ನೀಡಿರುವ ಬಗ್ಗೆ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.