ಬೆಂಗಳೂರು, ಫೆ.17 (DaijiworldNrews/HR): ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ಶಿವಲಿಂಗ ಪಾಟೀಲ ಎಂದು ಗುರುತಿಸಲಾಗಿದೆ.
"ಶಿವಲಿಂಗ ಪಾಟೀಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದು, ಒಂದು ವರ್ಷದ ಹಿಂದೆ ಸೆಂಟರ್ ಮುಚ್ಚಿದ್ದ. ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ಬಂಧಿಸಿರುವ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುತ್ತಿದ್ದು, ಪರೀಕ್ಷೆಯ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ನೀಡುತ್ತಿದ್ದ" ಎಂದು ಅಪರಾಧ ವಿಭಾಗದ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.