ಬೆಂಗಳೂರು, ಫೆ.17 (DaijiworldNrews/HR): ಆನ್ಲೈನ್ ಜೂಜು ಚಟುವಟಿಕೆ ನಿಯಂತ್ರಿಸುವ ಕುರಿತ ವಿಷಯದಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ ಎನ್ನಲಾಗಿದೆ.
"ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ" ಎಂಬುದಾಗಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ.
ಇನ್ನು ಸೂಕ್ತ ನಿಯಮಾವಳಿ ರೂಪಿಸುವ ತನಕ ಎಲ್ಲ ರೀತಿಯ ಆನ್ಲೈನ್ ಜೂಜಾಟ ನಿಲ್ಲಿಸಬೇಕು ಎಂಬುದಾಗಿ ದಾವಣಗೆರೆ ನಿವಾಸಿ ಡಿ.ಆರ್. ಶಾರದಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯಲ್ಲಿ ತಮ್ಮನ್ನೂ ಪ್ರತಿವಾದಿ ಆಗಿಸುವಂತೆ ಕೋರಿ ಮುಂಬೈ ಮೂಲದ ಆನ್ಲೈನ್ ರಮ್ಮಿ ಫೌಂಡೇಷನ್(ಟಿಒಆರ್ಎಫ್) ಮಧ್ಯಂತರ ಅರ್ಜಿ ಸಲ್ಲಿಸಿದೆ. ಅರ್ಜಿ ಅನುಮತಿಸಿರುವ ಪೀಠ, ಮಾ.31ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ ಎನ್ನಲಾಗಿದೆ.